ಬೆಂಗಳೂರು: ಪೌರ ಕಾರ್ಮಿಕರ ಅನುಕೂಲಕ್ಕಾಗಿ ಯಶವಂತಪುರದ ಆರ್‌ಟಿಓ ಕಚೇರಿ ಆವರಣದಲ್ಲಿ ನಿರ್ಮಿಸಿರುವ ‘ಸುವಿಧಾ ಕ್ಯಾಬಿನ್’ ಅನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಉದ್ಘಾಟಿಸಿದರು.
ಸುವಿಧಾ ಕ್ಯಾಬಿನ್‌ಅನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ಬೆಂಗಳೂರಿನ ನೈರ್ಮಲ್ಯಕ್ಕಾಗಿ ಶ್ರಮಿಸುವ ಪೌರ ಕಾರ್ಮಿಕರ ಸುರಕ್ಷತೆ, ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸುವಿಧಾ ಕ್ಯಾಬಿನ್ ನಿರ್ಮಿಸಲಾಗಿದೆ. ಬೆಳಗ್ಗೆ ಕೆಲಸ ಆರಂಭಿಸುವ ಮೊದಲು ತಮ್ಮ ವಸ್ತುಗಳನ್ನು ಇರಿಸಲು ಸುವಿಧಾ ಕ್ಯಾಬಿನ್‌ನಲ್ಲಿ ಸೂಕ್ತ ಸ್ಥಳಾವಕಾಶವಿದೆ. ಜತೆಗೆ, ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪೌರ ಕಾರ್ಮಿಕರು ಇದರ ಪ್ರಯೋಜನ ಪಡೆಯಲಿ,”ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಮೇಯರ್ ಗೌತಮ್ ಕುಮಾರ್ ಜೈನ್, ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು, ಬಿಬಿಎಂಪಿ ಆಯಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.









