ಶ್ರೀನಗರ: ಜಮ್ಮು ಕಾಶ್ಮೀರದಲ್ಲಿನ ಪಿಡಿಪಿ-ಬಿಜೆಪಿ ಮೈತ್ರಿ ಮುರಿದು ಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತ ಜಾರಿಮಾಡಲಾಗಿದೆ. ಮುಫ್ತಿ ಮೆಹಬೂಬ ರಾಜೀನಾಮೆ ನೀಡಿದ ನಂತರ ರಾಜ್ಯಪಾಲ ಎನ್. ಎನ್. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದರು.
ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಪಕ್ಷಕ್ಕೆ ಬಿಜೆಪಿ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದ ಹಿನ್ನೆಲೆ ಮುಖ್ಯಮಂತ್ರಿ ಸ್ಥಾನಕ್ಕೆ ಮುಫ್ತಿ ಮೆಹಬೂಬ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ 24 ಗಂಟೆಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದ್ದು, ರಾಜ್ಯಪಾಲ ಎನ್. ಎನ್. ವೋಹ್ರಾ ಅವರು ಶಿಫಾರಸ್ಸು ಮಾಡಿದ ಪತ್ರಕ್ಕೆ ರಾಷ್ಟ್ರಪತಿ ಕೋವಿಂದ್ ಅವರು ಸಹಿ ಮಾಡಿದ್ದಾರೆ.









