ಮೈಸೂರು:ಕೇಂದ್ರ ಸಚಿವ ಡಿ.ವಿ ಸದಾನಂದಗೌಡರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬದಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ನೀಡುವ ಕುರಿತು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದ ಬೆನ್ನಲ್ಲೇ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯಲು ಹಾಲಿ ಸಂಸದೆ ಶೋಭಾ ಕರಂದ್ಲಾಜೆ ನಿರ್ಧರಿಸಿದ್ದಾರೆ.
ಆಶಾಡ ಮಾಸದ ಎರಡನೇ ಶುಕ್ರವಾರ ಹಾಗೂ ಖಗ್ರಾಸ ಚಂದ್ರಗ್ರಹಣದ ಹಿನ್ನಲೆಯಲ್ಲಿ ಸಂಸದೆ ಶೋಭಾ ಕತಂದ್ಲಾಜೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ರು.ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಮೆಟ್ಟಿಲುಗಳನ್ನು ಹತ್ತಿ ದೇವಸ್ಥಾನಕ್ಕೆ ತೆರಳಿ ನಾಡದೇವಿಯ ದರ್ಶನ ಮಾಡಿದ್ರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡುತ್ತಾ ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎನ್ನುವ ಮಾಹಿತಿಯನ್ನು ನೀಡಿದ್ರು.ಈಗಾಗಲೇ ಚುನಾವಣಾ ಸಿದ್ದತೆ ಆರಂಭಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷರು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿದ್ದಾರೆ.ಸರ್ವೆ ಮೂಲಕ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ನೀಡ್ತಾರೆ ಅಂದ್ರು.
ಹಾಲಿ ಪ್ರತಿನಿಧಿಸುತ್ತಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ,ಬೇರೆ ಕ್ಷೇತ್ರದಿಂದಲೂ ಕಣಕ್ಕಿಳಿಯಲ್ಲ ಎಂದು ಕೇಸರಿ ಪಾಳಯ ಅಚ್ಚರಿಪಡುವ ಹೇಳಿಕೆ ನೀಡಿದ್ರು.
ಕಳಪೆ ಸಾಧನೆ ತೋರಿದ ಸಾಕಷ್ಟು ಹಾಲಿ ಸಂಸದರನ್ನು ಕೈಬಿಟ್ಟು ಹೊಸಬರಿಗೆ ಟಿಕೆಟ್ ನೀಡುವ ಕುರಿತು ಬಿಜೆಪಿ ಹೈಕಮಾಂಡ್ ಹೇಳಿಕೆ ನೀಡಿದೆ,ರಾಜ್ಯದಲ್ಲೂ ಕೆಲವರಿಗೆ ಕೋಕ್ ಎನ್ನಲಾಗಿದೆ. ಹಾಲಿ ಕೇಂದ್ರ ಸಚಿವ ಸದಾನಂದಗೌಡರ ಕ್ಷೇತ್ರ ಬದಲಾವಣೆಗೂ ಚಿಂತನೆ ನಡೆಸಿದ್ದು ಅವರಿಗೆ ಹಿಂದಿನ ಹಾಗೂ ಈಗ ಶೋಭಾ ಕರಂದ್ಲಾಜೆ ಪ್ರತಿನಿಧಿಸುತ್ತಿರುವ ಕ್ಷೇತ್ರದ ಟಿಕೆಟ್ ನೀಡಲು ಚಿಂತನೆ ನಡೆದಿದೆ. ಇದರಿಂದಾಗಿ ಮತ್ತೆ ಬೇರೆ ಕ್ಷೇತ್ರದಿಂದ ಕಣಕ್ಕಿಳಿಯುವ ರಿಸ್ಕ್ ಬೇಡ ಎನ್ನುವ ನಿರ್ಧಾರಕ್ಕೆ ಬಂದು ಲೋಕಸಭಾ ಚುನಾವಣಾ ಕಣದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದಾರೆ.ರಾಜ್ಯ ರಾಜಕಾರಣದಲ್ಲಿಯೇ ತೊಡಗಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಕೇಸರಿ ಪಾಳಯದಿಂದ ತಿಳಿದುಬಂದಿದೆ.









