ಬೆಂಗಳೂರು:ಲಾಕ್‌ಡೌನ್ ಕಾರಣದಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ ಮೌಲ್ಯಮಾಪನವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
2020ರ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯವು ದಿನಾಂಕ: 13-೦7-2020ರಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಬೇಕಿದ್ದು, ರಾಜ್ಯ ಸರ್ಕಾರವು ದಿನಾಂಕ: 14-೦7-2020 ರಿಂದ ದಿನಾಂಕ: 22-07-2020 ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಮೌಲ್ಯಮಾಪನ ಕಾರ್ಯವು ನಾಳೆಯಿಂದ ನಿಗದಿಯಂತೆ ನಡೆಯಲಿದೆ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.









