ಬೆಂಗಳೂರು: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶಗಳನ್ನು ಆಗಸ್ಟ್ 10 ರಂದು ಅಪರಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.
ಜೂನ್ 25 ರಿಂದ ಜುಲೈ 3 ರವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದೆ ಅಂದಾಜು 7.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಕೋವಿಡ್ ಆತಂಕದಲ್ಲಿಯೂ ಶಿಕ್ಷಣ ಇಲಾಖೆ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.ಕೋವಿಡ್ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.ಆತಂಕದಿಂದಲೇ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪದೇ ಪದೇ ಮುಂದೂಡಿಕೆಯಾಗಿ ಪರೀಕ್ಷೆ ನಡೆಯುವುದೋ ಇಲ್ಲವಾ ಎನ್ನುವ ಗೊಂದಲದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಆಗಸ್ಟ್ 10 ರ ಮಧ್ಯಾಹ್ನ ವಿದ್ಯಾರ್ಥಿಗಳ ಭವಿಷ್ಯ ಹೊರಬೀಳಲಿದೆ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸುದ್ದಿಲೋಕ ಪರವಾಗಿ ಆಲ್ ದಿ ಬೆಸ್ಟ್.









