ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ದ: ಸಿಎಂ

0
39

ಕೊಡಗು:ಕೊಡಗು ಜಿಲ್ಲೆಯ ಜನತೆ ಅತಂಕಕ್ಕೊಳಗಾಗಬೇಕಿಲ್ಲ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಮಳೆಹಾನಿ ನಿರ್ವಹಣೆ ಹಾಗೂ ಪರಿಹಾರ ವಿತರಣೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳ ಸಭೆ ನಡೆಸಿದ್ರು.ಜಿಲ್ಲೆಯಲ್ಲಿನ ಮಳೆ ಹಾನಿ,ಪರಿಹಾರ ಕಾರ್ಯಾಚರಣೆ ಸಂಬಂಧ ಸಂಪೂರ್ಣ ಮಾಹಿತಿ ಮಾಡಿದುಕೊಂಡ್ರು.ನಂತ್ರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಎಂ, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ, ಮಳೆಯಿಂದ ಕೊಡಗಿನಲ್ಲಿ ಉಂಟಾಗಿರುವ ಸಮಸ್ಯೆ ಅರಿಯಲು ಖುದ್ದು ಬಂದಿದ್ದೇನೆ,ಮಳೆ ಹಾನಿ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಡಿಸಿಗೆ ಸೂಚನೆ ನೀಡಲಾಗಿದೆ,ಜಿಲ್ಲಾಧಿಕಾರಿಗಳ ಖಾತೆಯಲ್ಲಿ  10 ಕೋಟಿ ಹಣ ಇದ್ದು ಹಣದ ಸಮಸ್ಯೆ ಇಲ್ಲ ಎಂದ್ರು.

ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಹೆಚ್ಚುವರಿ ಸಿಬ್ಬಂದಿ ಅಗತ್ಯವಿದೆ.ಈ ಕಾರಣಕ್ಕೆ ಸಮೀಪದ ಹಾಸನ ಮತ್ತು ಮೈಸೂರು ಜಿಲ್ಲೆಯಿಂದ ಸಿಬ್ಬಂದಿ ಕರೆಸಿಕೊಳ್ಳಲು ಕ್ರಮ ವಹಿಸಲಾಗಿದೆ.ಬೆಳೆ ಮತ್ತು ಮನೆ ಹಾನಿ ಬಗ್ಗೆ ಸಮಗ್ರ ಮಾಹಿತಿ ತರಿಸಿಕೊಂಡು ಸೂಕ್ತ ಪರಿಹಾರ ನೀಡಲಾಗುವುದು.ಭತ್ತದ ಬೆಳೆಗೆ ಹಾನಿಯಾಗಿದ್ದಲ್ಲಿ ಉಚಿತ ಭತ್ತ ಬೀಜ ವಿತರಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದ್ರು.

ಲೋಕೋಪಯೋಗಿ ರಸ್ತೆ ಸರಿಪಡಿಸಲು ಹೆಚ್ಚುವರಿ ಹಣ ಬೇಕೆಂದು ಜಿಲ್ಲಾಡಳಿತ ಕೇಳಿದೆ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ.ಮಳೆಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತೆ.ಜಿಲ್ಲೆಯ ಎಲ್ಲಾ ರೀತಿಯ ಮಳೆ ಹಾನಿ ಶಾಶ್ವತ ಪರಿಹಾರಕ್ಕೆ  329 ಕೋಟಿ ಬೇಡಿಕೆ ಬಂದಿದೆ.ಮೊದಲ ಹಂತದಲ್ಲಿ  100 ಕೋಟಿ ನೀಡಲಾಗುವುದು.ಮಳೆ ನಿಂತ ತಕ್ಷಣ ರಸ್ತೆ ಸರಿಪಡಿಸುವ ಕಾರ್ಯ ನಡೆಯಲಿದೆ ಎಂದ್ರು.

ಕೊಡಗು ಜಿಲ್ಲೆಯ ಜನತೆ ಅತಂಕಕ್ಕೊಳಗಾಗಬೇಕಿಲ್ಲ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು.ಸದ್ಯದಲ್ಲೇ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ವಿಶೇಷ ಸಭೆ ನಡೆಸಲಾಗುವುದು ಎಂದ್ರು.

- Call for authors -

LEAVE A REPLY

Please enter your comment!
Please enter your name here