ಮೈತ್ರಿ ಸರ್ಕಾರದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ?

0
408

ಬೆಂಗಳೂರು: ರೈತರ ಸಾಲ ಮನ್ನಾ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇದೀಗೆ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾಕ್ಕೆ ಮುಂದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಸಹಕಾರಿ ಮತ್ತು ‌ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ‌ ಪಡೆದಿರುವ ಸಾಲ ಮನ್ನಾಕ್ಕೆ ಮೈತ್ರಿ ಸರ್ಕಾರ ಮುಂದಾಗಿದ್ಯಾ? ಹೌದು ಇದೀಗ ಇಂತದೊಂದು ಪ್ರಶ್ನೆ ಎದುರಾಗಿದೆ.

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಸಾಲ ಮನ್ನಾ ಮಾಡುವಂತೆ ಪ್ರಜಾ ಪರಿವರ್ತನಾ ವೇದಿಕೆ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿ ಆಧರಿಸಿ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ವರದಿ ಕೇಳಿದೆ. ಸರ್ಕಾರಕ್ಕೆ ವರದಿ ಸಲ್ಲಿಸಲು ಆಯಾ ಜಿಲ್ಲೆಗಳ ಜಂಟಿ ನಿರ್ದೇಶಕರು ಕೂಡಲೇ ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ನೀಡುವಂತೆ ಆಯುಕ್ತರು ಸುತ್ತೊಲೆ ಹೊರಡಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖರ್ಚಾಗದೆ ಉಳಿದಿರುವ ೭೦ ಸಾವಿರ ಕೋಟಿಗೂ ಅಧಿಕ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದ್ದು ಸಾವಿರಾರು ವಿದ್ಯಾರ್ಥಿಗಳು ಇದ ಲಾಭ ಪಡೆಯಲಿದ್ದಾರೆ.
‌‌‌ ‌‌

- Call for authors -

LEAVE A REPLY

Please enter your comment!
Please enter your name here