ಚಿಕ್ಕಬಳ್ಳಾಪುರ: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಗೌಡ ಚಿಕ್ಕಬಳ್ಳಾಪುರ ಬಳಿಯ ಶ್ರೀ ವಿರಾಂಜನೇಯನ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯಲ್ಲಿರುವ ಸೂಲಾಲಪ್ಪನದಿನ್ನೆ ಬಳಿಯ ವೀರಾಂಜನೇಯ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಭಕ್ತಿಭಾವದಿಂದ ಇಷ್ಟಾರ್ಥಸಿದ್ದಿಗಾಗಿ ಬೇಡಿಕೊಂಡರು. ಆದಿಚುಂಚನಗಿರಿ ಶಾಖಾ ಮಠದ ಪೀಠಾದ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ವಿರಾಂಜನೇಯನಿಗೆ ವಿಶೇಷ ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ಇದೇ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಅಮೂಲ್ಯ ಹಾಗೂ ಜಗದೀಶ್ ಗೌಡ ದಂಪತಿಗೆ ಗೌರವ ಸಮರ್ಪಣೆ ಮಾಡಿ ಆಶೀರ್ವದಿಸಿದರು. ತದನಂತರ ಅಗಲಗುರ್ಕಿ ಗ್ರಾಮದ ಬಳಿಯ ಬಿಜಿಎಸ್ ಶಾಲೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ದಿನಾಚರಣೆಯಲ್ಲಿ, ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ನಟಿ ಅಮೂಲ್ಯ ಹಾಗೂ ಪತಿ ಜಗದೀಶ್ ಗೌಡ ಭಾಗವಹಿಸಿದರು. ನಟಿ ಅಮೂಲ್ಯ ಕಂಡ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತಸಗೊಂಡರು. ಇನ್ನೂ ವಿದ್ಯಾರ್ಥಿಗಳು ವೇಷ ಭೂಷಣ ಹಾಗೂ ನೃತ್ಯ ಕಂಡ ನಟಿ ಅಮೂಲ್ಯ ದಂಪತಿ ಕೂಡ ಅಷ್ಟೇ ಸಂತಸಗೊಂಡರು.









