ಬೆಂಗಳೂರು:ಹಳೇ ಭಿನ್ನಾಭಿಪ್ರಾಯ ಮರೆತು ಒಟ್ಟಾಗಿ ಕೆಲಸ ಮಾಡ್ತೀವಿ. ಮುಂದಿನ ಲೋಕಸಭೆ ಸಹ ಕಾಂಗ್ರೆಸ್ ಜತೆ ಚುನಾವಣೆ ಎದುರಿಸುತ್ತೇವೆ. ರಾಹುಲ್ ಗಾಂಧಿ ಸೇರಿದಂತೆ ಸ್ಥಳೀಯ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಫೈನಲ್ ಮಾಡ್ತೀವಿ ಇದು ನನ್ನ ಜೀವನದ ಕಡೆಯ ಹೋರಾಟ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ,ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲ ಕಾರ್ಯಕರ್ತರು ಮತ್ತು ಮುಖಂಡರು ಒಟ್ಟಾಗಿ ಕೆಲಸ ಮಾಡಿದ ಕಾರಣ 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ಇದರ ಜತೆಗೆ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ.ಶಿವಮೊಗ್ಗ ದಲ್ಲಿ ಅಭ್ಯರ್ಥಿ ಹಾಕಿದ್ದು ಕಡೇ ಗಳಿಕೆಯಲ್ಲಿ.. ಸ್ವಲ್ಪ ಮೊದಲೇ ಹಾಕಿದ್ದರೆ ಗೆಲ್ಲುವ ಅವಕಾಶ ಇತ್ತು. 50 ಸಾವಿರ ಮತಗಳ ಅಂತರದಿಂದ ಅಲ್ಲಿ ಸೋತಿರುವುದನ್ನು ಒಪ್ಪುತ್ತೇನೆ ಎಂದ್ರು.
ಗುಂಡ್ಲುಪೇಟೆ ಮತ್ತು ನಂಜನಗೂಡು ಚುನಾವಣೆ ಇರಬಹುದು, ಬಿಬಿಎಂಪಿ ಇರಬಹುದು ಎಲ್ಲದರಲ್ಲೂ ನಾವು ಕಾಂಗ್ರೆಸ್ ಜತೆ ನಿಂತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಏನೇ ಮಾತನಾಡಿದ್ದರೂ, ಅವರು ನಮ್ಮ ಬಗ್ಗೆ ಏನೇ ಮಾತನಾಡಿದ್ದರೂ ಮರೆತು ಮುಂದುವರಿದಿದ್ದೇವೆ ಇದು ನನ್ನ ಬದುಕಿನ ಕಡೆಯ ಹೋರಾಟ ಎಂದ್ರು.
ಸಚಿವ ಸಂಪುಟ ವಿಸ್ತರಣೆ ಇನ್ನು ವಿಳಂಬ ಇಲ್ಲ
ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ
ಹೀಗಾಗಿ ಸಿಎಂ ಕುಮಾರಸ್ವಾಮಿ , ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಜತೆ ಮಾತನಾಡಿ ವಿಸ್ತರಣೆ ಮಾಡಲಿದ್ದಾರೆ. ನಿಗಮ ಮಂಡಳಿಗಳ ನೇಮಕ ಸಹ ಶೀಘ್ರದಲ್ಲೇ ಮಾಡ್ತೀವಿ ಎಂದ್ರು
ಇದೆ ಸಂದರ್ಭದಲ್ಲಿ ದೇವೇಗೌಡ ಅವರ ನಿವಾಸಕ್ಕೆ ಅನಿತಾ ಕುಮಾರಸ್ವಾಮಿ ಭೇಟಿ ನೀಡಿದ್ರು.ರಾಮನಗರದಿಂದ ಚುನಾಯಿತರಾದ ಹಿನ್ನೆಲೆಯಲ್ಲಿ ಮಾವನವರ ಆಶೀರ್ವಾದ ಪಡೆಯಲು ಆಗಮಿಸಿದ್ರು.









