ಕೇಂದ್ರ ಸಚಿವ ಅನಂತಕುಮಾರ್ ಇನ್ನಿಲ್ಲ!

0
126

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್​ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ತೀವ್ರ ಅನಾರೋಗ್ಯದ ಕಾರಣದಿಂದಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿಗೆ ಕರೆತರಲಾಗಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ.

ಅನಂತ್​ ಕುಮಾರ್​ ಅವರ ಪಾರ್ಥೀವ ಶರೀರವನ್ನು ಈಗಾಗಲೇ ಅವರ ನಿವಾಸಕ್ಕೆ ವರ್ಗಾಯಿಸಿದ್ದು, ಬೆಳಗ್ಗೆ 9 ಗಂಟೆ ಸಮಯದ ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಭಾರತೀಯ ಜನತಾ ಪಕ್ಷದ ನಾಯಕರಾಗಿದ್ದ ಅನಂತ್ ಕುಮಾರ್ ಒಬ್ಬ ಯಶಸ್ವಿ ರಾಜಕಾರಣಿ. ಕರ್ನಾಟಕದ ದಕ್ಷಿಣ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೋದಿ ಸಚಿವ ಸಂಪುಟದಲ್ಲಿ ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದರು.

- Call for authors -

LEAVE A REPLY

Please enter your comment!
Please enter your name here