ಬೆಂಗಳೂರು: ಉದ್ಯಮಿ ಪುತ್ರ ವಿದ್ಯತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಮೊಹಮದ್ ನಲಪಾಡ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೆಳ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರಗೊಂಡ ಬೆನ್ನಲ್ಲೇ ಜಾಮೀನು ಕೋರಿ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ ವಿಶೇಷ ಸರ್ಕಾರಿ ಅಭಿಯೋಜಕತ ಮೂಲಕ ಪ್ರಕರಣದ ಪ್ರತಿವಾದಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜೂನ್ 11 ಕ್ಕೆ ಮುಂದೂಡಿತು.









